ಚಿಕ್ಕಮಗಳೂರು | 5 ತಿಂಗಳ ಹಿಂದಷ್ಟೇ ಮದುವೆ – ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

Public TV
1 Min Read

ಚಿಕ್ಕಮಗಳೂರು: ಪತಿಯೇ (Husband) ಪತ್ನಿಯನ್ನು  (Wife) ಚಾಕು ಇರಿದು ಹತ್ಯೆಗೈದಿರುವುದು ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಐದು ತಿಂಗಳ ಹಿಂದಷ್ಟೇ ಇವರಿಬ್ಬರ ಮದುವೆಯಾಗಿತ್ತು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 8 ಬಾರಿ ಚಾಕು – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಮೂರು ತಿಂಗಳ ಹಿಂದೆ ಪತಿ ಜೊತೆ ಜಗಳವಾಡಿ ನೇತ್ರಾ ತವರು ಸೇರಿದ್ದಳು. ಆಕೆಯ ತವರು ಮನೆಗೆ ಹೋಗಿ ಪತಿ ಚಾಕು ಇರಿದಿದ್ದಾನೆ ಎಂದು ನೇತ್ರಾ ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

Share This Article