ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (H.D Deve Gowda) ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪದ್ಮನಾಭನಗರದ ನಿವಾಸಕ್ಕೆ ತೆರಳಿದ್ದಾರೆ.
ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸೂಚನೆ ಮೇರೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇದನ್ನೂ ಓದಿ: Bengaluru | ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಹ್ಲಾದ್ ಜೋಶಿ
ಕೆಲ ದಿನಗಳ ಕಾಲ ಮನೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಬಿಸಿಲು, ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತೆ ಸೋಂಕು ತಗಲದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.
ದೇವೇಗೌಡರ ನಿವಾಸಕ್ಕೆ ಬಿಜೆಪಿ (BJP) ನಾಯಕರ ಭೇಟಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇನ್ನಿತರ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್‌ಚೇರ್‌ನಲ್ಲೇ ಆಸ್ಪತ್ರೆಗೆ ಬಂದ ಹೆಚ್‌ಡಿಡಿ