ಡಿಕೆಶಿ ಕನಸಿನ ಟನಲ್‌ ರೋಡ್‌ ಡಿಪಿಆರ್‌ನಲ್ಲಿ ಲೋಪದೋಷ!

Public TV
2 Min Read

– ರಾಜ್ಯ ಸರ್ಕಾರವೇ ನೇಮಕ ಮಾಡಿದ ತಜ್ಞರ ಸಮಿತಿಯಿಂದ ವರದಿ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಕನಸಿನ ಕೂಸು ಸುರಂಗ ರಸ್ತೆ (Tunnel Road) ನಿರ್ಮಾಣ ಮಾಡಲು ಸಿದ್ಧತೆ ಮಾಡಿದ ಸಮಗ್ರ ಯೋಜನಾ ವರದಿಯಲ್ಲಿ (DPR) ಲೋಪದೋಷಗಳಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಸಂಚಾರ ದಟ್ಟಣೆ ತಡೆಗಟ್ಟಲು 18 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳದಿಂದ (Hebbala) ಸಿಲ್ಕ್ ಬೋರ್ಡ್‌ವರೆಗೆ (Silk Board) 19 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಡಿಪಿಆರ್‌ ಮಾಡಲಾಗಿದೆ.

ಈ ಟನಲ್‌ ರಸ್ತೆಗೆ ವಿವಾದ ಜೋರಾಗುತ್ತಿದ್ದಂತೆ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಕಾರ್ಯನಿರ್ವಾಹಕ ನಿರ್ದೇಶಕ (ಸಿವಿಲ್) ಸಿದ್ದನಗೌಡ ಹೆಗರಡ್ಡಿ ನೇತೃತ್ವದಲ್ಲಿ ಐವರ ತಜ್ಞರ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಡಿಪಿಆರ್‌ ಅಧ್ಯಯನ ಮಾಡಿ ಹಲವು ದೋಷಗಳನ್ನು ಎತ್ತಿ ತೋರಿಸಿದೆ. ಇದನ್ನೂ ಓದಿ:  ಟ್ರಂಪ್‌ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

ಡಿಪಿಆರ್‌ನಲ್ಲಿರುವ ಲೋಪ ದೋಷಗಳೇನು?
ತರಾತುರಿಯಲ್ಲಿ ಡಿಪಿಆರ್ ತಯಾರಿಕೆ ಮಾಡಲಾಗಿದೆ. ಸುರಂಗ ರಸ್ತೆ ಯೋಜನೆ ದೊಡ್ಡ ಯೋಜನೆಯಾಗಿದ್ದು 4 ಕಡೆ ಮಾತ್ರ ಮಣ್ಣಿನ ಪರೀಕ್ಷೆ ಮಾಡಲಾಗಿದೆ. 4 ಕಡೆ ಮಣ್ಣಿನ ಪರೀಕ್ಷೆ ಮಾಡಿ ಈ ಯೋಜನೆ ಮಾಡುವುದು ಸಾಧುವಲ್ಲ. ಇದನ್ನೂ ಓದಿ: ದೇಶದ ಮೊದಲ ಆದಾಯ ಸಮೀಕ್ಷೆ ಫೆಬ್ರವರಿಯಲ್ಲಿ ಆರಂಭ

ಹೆಬ್ಬಾಳ ಟು ಸಿಲ್ಕ್ ಬೋರ್ಡ್‌ವರೆಗೆ ರೆಡ್ ಲೈನ್ ಮೆಟ್ರೋ ಮಾರ್ಗ ಬರುತ್ತಿದೆ. ಲಾಲ್‌ಬಾಗ್ ಬಳಿ ಮೆಟ್ರೋ ಮಾರ್ಗ ಬರಬೇಕಾದ್ರೆ ಟನಲ್ ಯಾಕೆ?

ಪೀಕ್ ಅವರ್ ಟ್ರಾಫಿಕ್ ಗಣನೆಗೆ ತೆಗೆದುಕೊಂಡಿಲ್ಲ ಮತ್ತು ಹೆಬ್ಬಾಳ ನಾಲಾ ಡೈವರ್ಷನ್ ಸರಿಯಿಲ್ಲ. ಬೃಹತ್ ಯೋಜನೆಗೆ 10 ವರ್ಷ ಅಲ್ಲ 25 ವರ್ಷ ಬೇಕಾಗಬಹುದು. ಪಾದಚಾರಿ ಮಾರ್ಗ, ನೀರಿನ ಒಳಚರಂಡಿ ಸೇರಿದಂತೆ ಹೈಡ್ರಾಲಿಕ್ ವಿನ್ಯಾಸ, ವಿಪತ್ತು ನಿರ್ವಹಣೆ ಬಗ್ಗೆ ಉಲ್ಲೇಖ ಇಲ್ಲ.

ಭೂಸ್ವಾಧಿನ ಹೇಗೆ ಎನ್ನುವುದರ ಬಗ್ಗೆ ಉಲ್ಲೇಖ ಆಗಿಲ್ಲ. ಪರಿಸರ ಕಾಳಜಿ, ಸಾರಿಗೆ ವ್ಯವಸ್ಥೆ ನಿರ್ವಹಣೆ ಮಾಹಿತಿ ಇಲ್ಲ. ಸಂಚಾರ ಸಂಬಂಧ ಮೂಲಭೂತವಾಗಿ ದೋಷಪೂರಿತವಾಗಿದೆ. ದುರ್ಬಲ ಸಂಚಾರ ಅಧ್ಯಯನ ಮತ್ತು ಪ್ರಾಥಮಿಕ ಡೇಟಾ ಕೊರತೆಯಿದೆ. ಬಿಎಂಟಿಸಿ, ಮೆಟ್ರೋ, ಉಪನಗರ ರೈಲುಗಳ ಅನುಕೂಲದ ಮಾಹಿತಿ ಉಲ್ಲೇಖಿಸಿಲ್ಲ.

Share This Article