ಆರ್‌ಎಸ್‌ಎಸ್‌ ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿಷೇಧಿಸಬೇಕು: ದಿನೇಶ್‌ ಗುಂಡೂರಾವ್‌

Public TV
1 Min Read

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಾಗಿರದ ಕಾರಣ ಸರ್ಕಾರಿ ನೌಕರರು ಭಾಗವಹಿಸಬಾರದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್‌ ಖರ್ಗೆ (Priyank Kharge) ಪತ್ರ ಬರೆದಿದ್ದು ಸರಿಯಾಗಿದೆ. ಆರ್‌ಎಸ್‌ಎಸ್‌ ಅನ್ನು ಅಧಿಕೃತವಾಗಿ ನಿಷೇಧಿಸಬೇಕು. ರಾಜಕೀಯ ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಜಾಗದಲ್ಲಿ ಅನುಮತಿ ನೀಡಬಾರದು ಎಂದರು. ಇದನ್ನೂ ಓದಿ:  ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ: ಸಿಎಂ

 

‌ಸರ್ಕಾರಗಳನ್ನು ತೆಗೆಯುವಲ್ಲಿ, ಸರ್ಕಾರ ರಚನೆ ಮಾಡುವಲ್ಲಿ, ಮಂತ್ರಿ ಮಂಡಳ ರಚನೆಯಲ್ಲಿ ಆರ್‌ಎಸ್‌ಎಸ್‌ ನಾಯಕರು ಭಾಗಿಯಾಗುತ್ತಾರೆ. ಚುನಾವಣೆಯಲ್ಲೂ ಸಂಘದ ನಾಯಕರು ಸ್ಪರ್ಧಿಸುತ್ತಾರೆ. ಈ ಕಾರಣಕ್ಕೆ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ನಿಷೇಧಿಸಬೇಕು ಎಂದು ಹೇಳಿದರು.

Share This Article