– ಬಿಜೆಪಿ, ಜೆಡಿಎಸ್ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ
ಕೋಲಾರ: ಕೋಲಾರದ (Kolar) ಶ್ರೀನಿವಾಸಪುರ ಜೆಡಿಎಸ್ ಶಾಸಕ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ (Grant) ನೀಡದ ಸರ್ಕಾರದ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಸರ್ಕಾರದ ತಾರತಮ್ಯ ನೀತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜೆಡಿಎಸ್ ಶಾಸಕ ರಿಟ್ ಅರ್ಜಿ ಸಲ್ಲಿಸಿದ್ದು, ಇದು ಅನುದಾನ ಗೊಂದಲ ಹಾಗೂ ಗಲಾಟೆಗೆ ಕಾರಣವಾಗಿದೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ (Venkatashiva Reddy) ಹೈಕೋರ್ಟ್‌ನಲ್ಲಿ (High Court) ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ನಮಗೂ ಸರ್ಕಾರ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ
ಕಾಂಗ್ರೆಸ್ ಶಾಸಕರಿಗೆ ಮಾತ್ರ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿರುವ ಸರ್ಕಾರ, ಜೆಡಿಎಸ್ ಹಾಗೂ ಬಿಜೆಪಿ ಶಾಸಕರಿರುವ ಕಡೆಗಳಲ್ಲಿ ಅನುದಾನ ನೀಡುತ್ತಿಲ್ಲ ಎಂದು ಈ ಮೊದಲೇ ಕಿಡಿಕಾರಿದ್ದರು. ಅದರಂತೆ ಕ್ಷೇತ್ರದ ಅಭಿವೃದ್ಧಿಗಾಗಿ ಪದೇ ಪದೇ ಮನವಿ ಮಾಡಿದರೂ ಸಹ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಸಂವಿಧಾನದ ಆರ್ಟಿಕಲ್ 14ರ ಸಮಾನತೆಯ ನೀತಿ ಉಲ್ಲಂಘಿಸಿದೆ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಅನುದಾನ ಬಿಡುಗಡೆ ಮಾಡದಿದ್ರೆ ರಾಜಕೀಯ ನಿವೃತ್ತಿ, ಯಾವ ಪಕ್ಷಕ್ಕೂ ಹೋಗಲ್ಲ: ಶಾಸಕ ಸತೀಶ್ ಸೈಲ್
ಜೆಡಿಎಸ್, ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಈ ಮೊದಲು ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪ ಮಾಡಿದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಈ ಹಿಂದೆಯೂ ಹಲವು ಬಾರಿ ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಪದೆಪದೇ ಕೆಂಡ ಕಾರಿದ್ದರು. ಇದನ್ನೂ ಓದಿ: ಫೋನ್ ಟ್ಯಾಪಿಂಗ್ ಕೇಸ್; ಅಲೋಕ್ ಕುಮಾರ್ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ