ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

Public TV
1 Min Read

– ಮ್ಯಾಜಿಸ್ಟ್ರೇಟ್‌ ಮುಂದೆ ಸಂತ್ರಸ್ತೆ ಹೇಳಿಕೆ ಬಳಿಕ ಅರೆಸ್ಟ್‌

ಕೋಲ್ಕತ್ತಾ: ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಬಳಿ ಒಡಿಶಾದ (Odisha) ಜಲೇಶ್ವರ ಮೂಲದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಎದುರು ನೀಡಿದ ಹೇಳಿಕೆಯನ್ನಧಾರಿಸಿ ಆಕೆ ಜೊತೆಗೆ ಊಟಕ್ಕೆ ಬಂದಿದ್ದ ಸ್ನೇಹಿತನನ್ನ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ತಲುಪಿದೆ.

West Bengal Police

ನನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನ
ವರದಿಗಳ ಪ್ರಕಾರ, ಸಂತ್ರಸ್ತೆ ಮ್ಯಾಜಿಸ್ಟ್ರೇಟ್‌ ಮುಂದೆ ನೀಡಿದ ಹೇಳಿಕೆಯಲ್ಲಿ, ಜೊತೆಗಿದ್ದ ಸಹಪಾಠಿ ತನ್ನ ಮೇಲೆ ಬಲವಂತವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನಾಧರಿಸಿ ಊಟದ ಸಮಯದಲ್ಲಿ ಜೊತೆಗಿದ್ದ ಸಹಪಾಠಿಯನ್ನ 6ನೇ ಆರೋಪಿಯಾಗಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಅರೆಸ್ಟ್‌

Stop Rape Crime 2

ಕಳೆದ ಶುಕ್ರವಾರ ಜಲೇಶ್ವರದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆ ತನ್ನ ಸ್ನೇಹಿತನೊಂದಿಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು ಅವರನ್ನು 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

ಘಟನೆ ಬಳಿಕ ಆಕೆಯ ಸ್ನೇಹಿತ ಕೂಡ ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ಯುವತಿಗೆ ಸುಳ್ಳು ಹೇಳಿ ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಅಲ್ಲದೇ ಆಕೆಯ ಫೋನ್ ಕಸಿದುಕೊಂಡು 5,000 ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಇದನ್ನೂ ಓದಿ: ರಾತ್ರಿ ವೇಳೆ ಹೆಣ್ಣುಮಕ್ಕಳನ್ನ ಹೊರಗೆ ಬಿಡಬಾರದು – ಗ್ಯಾಂಗ್‌ರೇಪ್‌ ಕೇಸ್‌ ಬಗ್ಗೆ ದೀದಿ ಶಾಕಿಂಗ್‌ ಹೇಳಿಕೆ

Share This Article