ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಮುಂದುವರೆದಿದೆ. ಆರೋಪಿ ಚಿನ್ನಯ್ಯ ನ್ಯಾಯಾಲಯದಲ್ಲಿ ಹೊಸ ಕಥೆ ಬಿಚ್ಚಿಟ್ಟಿದ್ದು, ಎಸ್ಐಟಿ (SIT) ಅಧಿಕಾರಿಗಳನ್ನೇ ತಬ್ಬಿಬ್ಬಾಗಿಸಿದೆ.
ಶವ ಹೂತ ರಹಸ್ಯವನ್ನು ಚಿನ್ನಯ್ಯ ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ ಚಿನ್ನಯ್ಯ ಹೇಳಿಕೆ ನೀಡುವ ವೇಳೆ ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತಿದ್ದಾಗಿ ಹೊಸ ಕಥೆಯನ್ನು ಹೇಳಿದ್ದಾನೆ. ಎಸ್ಐಟಿ ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡದೆ ಇರುವುದು ಅಧಿಕಾರಿಗಳಿಗೆ ಆಶ್ಚರ್ಯ ತಂದಿದೆ. ಚಿನ್ನಯ್ಯನ ಈ ಹೊಸ ಹೇಳಿಕೆ ಕೇಳಿ ಎಸ್ಐಟಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.ಇದನ್ನೂ ಓದಿ: ಕಾಲ್ಸೆಂಟರ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ – ಹೊರರಾಜ್ಯದವರನ್ನೇ ಟಾರ್ಗೆಟ್ ಮಾಡ್ತಿದ್ದ 16 ಜನರ ಗ್ಯಾಂಗ್ ಬಂಧನ
ಮೊದಲ ದಿನದಿಂದಲೇ ಇಡೀ ಪ್ರಕರಣದ ಹಾದಿ ತಪ್ಪಿಸುವ ರೀತಿಯಲ್ಲೇ ಹೇಳಿಕೆ ಕೊಟ್ಟುಕೊಂಡು ಬಂದಿದ್ದ ಚಿನ್ನಯ್ಯ ಇದೀಗ ಮತ್ತೆ ವರಸೆ ಬದಲಿಸಿದ್ದಾನೆ. ಬೆಳ್ತಂಗಡಿ ಕೋರ್ಟ್ನಲ್ಲಿ ಬಿಎನ್ಎಸ್ಸೆಸ್ 183 ಅಡಿ ಹೇಳಿಕೆ ದಾಖಲಿಸಿದ್ದ ವೇಳೆ ಶವ ರಹಸ್ಯದ ಹೊಸ ಕಥೆ ಹೇಳಿದ್ದಾನೆ. ಅಂದರೆ ಒಂದೇ ಜಾಗದಲ್ಲಿ ಹತ್ತು ಹೆಣ ಹೂತ್ತಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ನಿರ್ದಿಷ್ಟವಾಗಿ ಹತ್ತು ಶವಗಳನ್ನು ಯಾವಾಗ ಮತ್ತು ಎಲ್ಲಿ ಹೂತಿದ್ದು ಎಂಬುದರ ಬಗ್ಗೆ ಚಿನ್ನಯ್ಯ ಸ್ಪಷ್ಟ ಮಾಹಿತಿ ನೀಡಿಲ್ಲ. ಹಾಗಾಗಿ ಈ ಬಗ್ಗೆ ಆಳವಾದ ವಿಚಾರಣೆ ನಡೆಸಲು ಎಸ್ಐಟಿ ಸಿದ್ಧತೆ ನಡೆಸಿದೆ.
ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿರುವುದರಿಂದ ಅಲ್ಲಿಯೇ ವಿಚಾರಣೆ ನಡೆಸಲು ಎಸ್ಐಟಿ ತಯಾರಿ ನಡೆಸಿದೆ. ಈ ಹೇಳಿಕೆಯ ಸತ್ಯಾಸತ್ಯತೆ ಮತ್ತು ಈ ಹಿಂದೆ ನೀಡಿದ ಹೇಳಿಕೆಗೂ ಇದಕ್ಕೂ ಇರುವ ವ್ಯತ್ಯಾಸಗಳ ಬಗ್ಗೆ ಎಸ್ಐಟಿ ತನಿಖೆ ಮುಂದುವರಿಸಿದೆ.
ಇನ್ನೊಂದು ಕಡೆ ಬುರುಡೆ ಪ್ರಕರಣದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡ ಗಿರೀಶ್ ಮಟ್ಟಣ್ಣವರ್ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭವಾಗಿದೆ.ಇದನ್ನೂ ಓದಿ: ಹೆಂಡ್ತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿ, ದೇವರಿಗೆ ಮೂರು ಪ್ರಾಣಿ ಬಲಿ ಅರ್ಪಿಸಿದ್ದ ಕೇಡಿ ಗಂಡ!