ಭತ್ತ ಸಂಶೋಧನೆ: ಫಿಲಿಪೈನ್ಸ್‌ನೊಂದಿಗೆ ಮಹತ್ವದ ಒಡಂಬಡಿಕೆಗೆ ಚಲುವರಾಯಸ್ವಾಮಿ ಸಹಿ

Public TV
2 Min Read

ಮನಿಲಾ: ರಾಜ್ಯದಲ್ಲಿ ಭತ್ತದ (Paddy) ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಪೈನ್ಸ್‌ನ (Philippines) ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.

ಫಿಲಿಪೈನ್ಸ್‌ನ ಮನಿಲಾದಲ್ಲಿರುವ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಒಪ್ಪಂದಕ್ಕೆ ಸಹಿ ಮಾಡಿದರು. ಇದನ್ನೂ ಓದಿ: ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ನೆರೆ ಹಾವಳಿ, ಬರ ಪರಿಸ್ಥಿತಿಗಳು ಕರಾವಳಿ, ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ. ಇದನ್ನೂ ಓದಿ: ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ ಭತ್ತದ ಮಹತ್ವ, ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು, ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗೂ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಭತ್ತದ ತಳಿಗಳ ಸಂರಕ್ಷಣೆ, ಸಂಶೋಧನೆಗೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತಪರ ಯೋಜನೆಗಳ ಬಗ್ಗೆ ಫಿಲಿಪೈನ್ಸ್‌ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ಸೂಚಿಸಿ ಇದಕ್ಕೆ ಕಾರಣರಾಗಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು. 1945ರಿಂದಲೂ ಭಾರತ ಮತ್ತು ಫಿಲಿಪೈನ್ಸ್ ನಡುವೆ ಇರುವ ಬಾಂಧವ್ಯ, ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ ಶ್ಲಾಘಿಸಲಾಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

ಅಂತರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾನಿರ್ದೇಶಕರಾದ ಜುನೆಲ್ ಸಯಾನೋ , ಡಾ ಸಂಕಲ್ಪ್ ಭೋಸ್ಲೆ, ಮಂಡ್ಯ ಕೃಷಿ ವಿ.ವಿ ವಿಶೇಷಾಧಿಕಾರಿ ಡಾ ಕೆ.ಎಂ ಹರಿಣಿಕುಮಾರ್, ಡಾ ವೇಣು ಪ್ರಸಾದ್, ಡಾ ಮಲ್ಲಿಕಾರ್ಜುನ ಸ್ವಾಮಿ, ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಎ.ಬಿ.ಪಾಟೀಲ್ ವಿ.ಸಿ ಫಾರಂನ ಭತ್ತದ ತಳಿ ವಿಜ್ಞಾನಿ ಡಾ ದೀಪಕ್, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌

ಇದೇ ವೇಳೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೀನ್ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಮಹಾಭಾರತದ ‘ಕರ್ಣ’ ಪಂಕಜ್ ಧೀರ್ ನಿಧನ – ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ

Share This Article