ದೊಡ್ಡಗೌಡ್ರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ

1 Min Read

ಬೆಂಗಳೂರು: ನಟ ರಿಷಬ್ ಶೆಟ್ಟಿ (Rishab Shetty) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು (H.D. Deve Gowda) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಭೇಟಿಯಾಗಿ, ಕೆಲ ಕಾಲ ದೊಡ್ಡಗೌಡರ ಜೊತೆ ಮಾತುಕತೆ ನಡೆಸಿದರು.

- Advertisement -

- Advertisement -

ಕಳೆದ ವಾರ ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವಾರ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದ ಹಿನ್ನೆಲೆ ಆಸ್ಪತ್ರೆಯಿಂದ ಅವರನ್ನು ಅ.13 ರಂದು ಡಿಸ್ಚಾರ್ಜ್ ಮಾಡಲಾಗಿತ್ತು. ಇದನ್ನೂ ಓದಿ: ದೊಡ್ಡಗೌಡ್ರ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್

- Advertisement -

- Advertisement -

ದೇವೇಗೌಡರು ಕೆಲ ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಬಿಸಿಲು, ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತೆ ಸೋಂಕು ತಗುಲದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: Bengaluru | ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಹ್ಲಾದ್ ಜೋಶಿ

Share This Article