ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಪತ್ರ ಬರೆದಿದ್ದಾರೆ.
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ.
I have written a… pic.twitter.com/Jsp8DRWXIV
— Basanagouda R Patil (Yatnal) (@BasanagoudaBJP) October 17, 2025
ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಯತ್ನಾಳ್ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಛಲವಾದಿ, ಈಶ್ವರಪ್ಪಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಸರ್ಕಾರ
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಯನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.