ಬೆಂಗಳೂರಲ್ಲಿ ವಿದ್ಯಾರ್ಥಿನಿ ಕತ್ತು ಕೊಯ್ದು ಹತ್ಯೆ ಕೇಸ್‌ – ಪಾಗಲ್‌ ಪ್ರೇಮಿ ಬಂಧನ

Public TV
1 Min Read

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದ ಪಾಗಲ್‌ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಹತ್ಯೆ ಮಾಡಿದ್ದ ವಿಘ್ನೇಶ್‌ ಮತ್ತು ಆತನಿಗೆ ನೆರವಾಗಿದ್ದ ಹರೀಶ್‌ ಎಂಬಾತನನ್ನು ಶ್ರೀರಾಂಪುರ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿಯನ್ನು ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಇವರ ಬಂಧನಕ್ಕೆ ಶ್ರೀರಾಂಪುರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ 2 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯವಿದ್ದ ಯಾಮಿನಿಯನ್ನು ಪ್ರೀತಿಸುವಂತೆ ವಿಘ್ನೇಶ್‌ ಒತ್ತಾಯಿಸುತ್ತಿದ್ದ. ಆದರೆ, ಅದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ್ದಳು. ಗುರುವಾರ ಸಂಜೆ ಕಾಲೇಜು ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಅಡ್ಡಗಟ್ಟಿ, ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ.

Share This Article