ಮಂಡ್ಯ: ಮೂರು ಸಾರಿಗೆ ಬಸ್ಗಳ ನಡುವೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವಿಗೀಡಾಗಿದ್ದು, 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ಬಾಚಹಳ್ಳಿ ಗ್ರಾಮದ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಎರಡು KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದವು. ಅಪಘಾತಗೊಂಡ ಬಸ್ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆಯಿತು. ಮೂರು ಬಸ್ಗಳ ಕೆಲವು ಭಾಗಗಳು ಜಖಂಗೊಂಡವು. ಬಸ್ನಲ್ಲಿದ್ದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬಗ್ಗೆ ಮಾಹಿತಿ ಇನ್ನೂ ಸಿಕ್ಕಿಲ್ಲ. ಗಾಯಾಳುಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ಗೆ ರವಾನಿಸಲಾಗಿದೆ.