ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ (Karnataka Rain) ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು
ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.