ತಪ್ಪು ಮಾಡಿದವ್ರಿಗೆ ಶಿಕ್ಷೆ ಆಗೇ ಆಗುತ್ತೆ: ಹಿಟ್‌ & ರನ್‌ ಆರೋಪಕ್ಕೆ ನಟಿ ದಿವ್ಯಾ ಸುರೇಶ್‌ ರಿಯಾಕ್ಷನ್

Public TV
2 Min Read

ಮ್ಮ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆಂಬ ಆರೋಪ ಕುರಿತು ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ (Divya Suresh) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹಿಟ್‌ & ರನ್‌ ಆರೋಪಕ್ಕೆ ವೀಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಅಪಘಾತಕ್ಕೆ ಪ್ರತಿಕ್ರಿಯೆಯಾಗಿ ವೀಡಿಯೋವೊಂದನ್ನು ದಿವ್ಯಾ ಸುರೇಶ್ ಹಂಚಿಕೊಂಡಿದ್ದಾರೆ.‌ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ನಾವು ಎಲ್ಲರು ಸಮಾನರೆ ಎಂದು ಹೇಳಿದ್ದಾರೆ.

ತಪ್ಪು ಯಾರೇ ಮಾಡಿರಲಿ, ಹೇಗೆ ಮಾಡಿರಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ಆಗೇ ಆಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

ಅ.4ರ ರಾತ್ರಿ 1:30ಕ್ಕೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅ.7 ರಂದು ಗಾಯಗೊಂಡ ಮಹಿಳೆಯ ಸಂಬಂಧಿ ಕಿರಣ್ ನಟಿ ವಿರುದ್ಧ ದೂರು ದಾಖಲಿಸಿದ್ದರು.

ದೂರಿನಲ್ಲಿ ಏನಿದೆ?
ನಮ್ಮ ಸಂಬಂಧಿ ಅನುಷಾಗೆ ಹುಷಾರಿರಲಿಲ್ಲ. ಹೀಗಾಗಿ ಅವತ್ತು ರಾತ್ರಿ ಗಿರಿನಗರದ ಆಸ್ಪತ್ರೆಗೆ ಹೋಗ್ತಾ ಇದ್ದೆವು. ಬೈಕ್‌ನಲ್ಲಿ ಮಧ್ಯೆ ಅನುಷಾ ಕುತಿದ್ರು. ನಾನು ಬೈಕ್ ಓಡಿಸುತ್ತಾ ಇದ್ದೆ. ಅನಿತಾ ಬೈಕ್ ಹಿಂದೆ ಕುಳಿತಿದ್ದರು. ಈ ವೇಳೆ ನಾಯಿ ಬೊಗಳಿದ್ದಕ್ಕೆ ಸ್ವಲ್ಪ ಬಲಕ್ಕೆ ಬೈಕ್‌ ತೆಗೆದುಕೊಂಡೆ. ಆಗ ಏಕಾಏಕಿ ಕ್ರಾಸ್‌ನಲ್ಲಿ ಬಂದು ದಿವ್ಯಾ ಸುರೇಶ್ ಕಾರು ಅನಿತಾ ಅವರ ಕಾಲಿಗೆ ಗುದ್ದಿತ್ತು. ದಿವ್ಯಾ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಬಿದ್ದಿದ್ದೆವು. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

ಕಾರು ಡಿಕ್ಕಿ ಹೊಡೆದಾಗ ಮಹಿಳೆಗೆ ಕಾಲಿನ ಮಂಡಿ ಚಿಪ್ಪಿಗೆ ಪೆಟ್ಟಾಗಿತ್ತು. ನಮ್ಮನ್ನು ನೋಡದೆ, ಕಾರು ನಿಲ್ಲಿಸದೆ ದಿವ್ಯಾ ಸುರೇಶ್ ಪರಾರಿಯಾಗಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಾಲಿನ ಮಂಡಿ ಚಿಪ್ಪು ಮುರಿದಿರೋದಾಗಿ ಚಿಕಿತ್ಸೆ ನೀಡಿದ್ದಾರೆ.

ಸಿಸಿಟಿವಿ ಮೂಲಕ ಕಾರಿನ ನಂಬರ್ ಟ್ರೇಸ್ ಮಾಡಿದ್ದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ದಿವ್ಯಾ ಸುರೇಶ್‌ರನ್ನು ಕರೆಸಿ, ಕಾರನ್ನು ಸೀಜ್ ಮಾಡಿದ್ದರು. ಆದರೆ, ರಾತ್ರೋರಾತ್ರಿ ನಟಿ ಕಾರನ್ನು ಬಿಡಿಸಿಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

ಅನಿತಾಗೆ ಆಪರೇಷನ್‌ಗೆ ಎರಡು ಲಕ್ಷ ರೂ. ಹಣ ಖರ್ಚಾಗಿದೆ. ನಾನು ಕ್ಯಾಬ್‌ ಓಡಿಸಿ ಜೀವನ ಮಾಡುತ್ತಿದ್ದೇನೆ. ಇದುವರೆಗೂ ಸಂತ್ರಸ್ಥ ಮಹಿಳೆಯನ್ನು ನಟಿ ದಿವ್ಯಾ ಸುರೇಶ್ ಸಂಪರ್ಕಿಸಿಲ್ಲ. ದಯವಿಟ್ಟು ನಮಗೆ ಪರಿಹಾರ ಕೊಡಿಸಿ ಎಂದು ಕಿರಣ್‌ ಮನವಿ ಮಾಡಿದ್ದಾರೆ.

Share This Article