ನವದೆಹಲಿ: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಸಿಬಿಐ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಇದನ್ನೂ ಓದಿ: ಕರ್ನೂಲ್ ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ – ಬಸ್ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯುವಂತಿಲ್ಲ!
ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್ಐಟಿಯಲ್ಲಿ (SIT) ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ
ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್
