ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

Public TV
1 Min Read

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ (FDI) ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.

ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜೊತೆ ಈ ವಿಷಯದ ಬಗ್ಗೆ ಚರ್ಚಿಸುತ್ತಿದೆ. ಈ ಪ್ರಸ್ತಾವನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

ಪ್ರಸ್ತುತ ಶೇ.20 ಎಫ್‌ಡಿಐ ಮಿತಿ ಹೇರಿದೆ. ಹೊಸ ಕ್ರಮವು ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ನಿಯಮಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿದೆ. ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಪ್ರಸ್ತುತ ಎಫ್‌ಡಿಐ ಮಿತಿ ಶೇ.74 ರಷ್ಟಿದೆ. ಈ ಬಗ್ಗೆ ಆರ್‌ಬಿಐ ಜೊತೆಗೆ ಹಣಕಾಸು ಸಚಿವಾಲಯ ಚರ್ಚಿಸುತ್ತಿದೆ.

ಭಾರತದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲು ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ. ಶೀಘ್ರದಲ್ಲೇ ಹೂಡಿಕೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ದುಬೈ ಮೂಲದ ಎಮಿರೇಟ್ಸ್ ಎನ್‌ಬಿಡಿ ಇತ್ತೀಚೆಗೆ ಆರ್‌ಬಿಎಲ್ ಬ್ಯಾಂಕಿನಲ್ಲಿ 60% ಪಾಲನ್ನು 3 ಬಿಲಿಯನ್‌ ಡಾಲರ್‌ಗೆ ಖರೀದಿಸಿದೆ. ಸುಮಿಟೊಮೊ ಮಿಟ್ಸುಯಿ ಬ್ಯಾಂಕಿಂಗ್ ಕಾರ್ಪ್ ಯೆಸ್ ಬ್ಯಾಂಕಿನಲ್ಲಿ 20% ಪಾಲನ್ನು 1.6 ಬಿಲಿಯನ್‌ ಡಾಲರ್‌ಗೆ ಸ್ವಾಧೀನಪಡಿಸಿಕೊಂಡಿದ್ದು, ಜಪಾನಿನ ಸಾಲದಾತ ನಂತರ ಇದನ್ನು ಮತ್ತೊಂದು 4.99% ಹೆಚ್ಚಿಸಿದ್ದರಿಂದ ಭಾರತದ ಬ್ಯಾಂಕಿಂಗ್ ಉದ್ಯಮದಲ್ಲಿ ವಿದೇಶಿ ಆಸಕ್ತಿ ಹೆಚ್ಚುತ್ತಿದೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ವಿದೇಶಿ ಹೂಡಿಕೆದಾರರಿಂದ ಆಸಕ್ತಿಯನ್ನು ನಿರೀಕ್ಷಿಸುತ್ತಿವೆ. ವಿದೇಶಿ ಮಾಲೀಕತ್ವದ ಮಿತಿಯನ್ನು ಹೆಚ್ಚಿಸುವುದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಬಂಡವಾಳವನ್ನು ಪಡೆಯಲು ಸಹಾಯವಾಗುತ್ತದೆ.

Share This Article