ಕಲಬುರಗಿ: ಯಾದಗಿರಿಯಲ್ಲಿ (Yadgir) ನಡೆದ ಮಾರಕ ಹಲ್ಲೆ ಪ್ರಕರಣದಲ್ಲಿ ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ ಅಂಜಲಿ ಕಂಬಾನೂರ್ (38) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದ್ದಿದ್ದಾರೆ. ನವೆಂಬರ್ 12ರಂದು ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ಯಾದಗಿರಿ ನಗರದಲ್ಲಿ ದುಷ್ಕರ್ಮಿಗಳು ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಇದನ್ನೂ ಓದಿ: ತೀರ್ಥಹಳ್ಳಿ | ನೇಣಿಗೆ ಶರಣಾದ ಪದವಿ ವಿದ್ಯಾರ್ಥಿನಿ
ಅಂಜಲಿ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಪತಿ ಗಿರೀಶ್ ಕಂಬಾನೂರ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಹಿನ್ನೆಲೆ ಅನುಕಂಪ ನೇಮಕಾತಿ ಆಧಾರದ ಮೇಲೆ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಪಡೆದಿದ್ದರು.
ಹಲ್ಲೆ ಸಂಬಂಧಿಸಿದಂತೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ದಾಳಿಯ ಹಿಂದಿರುವ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ XUV ಕಾರು – 5 ಮಂದಿ ಸಾವು
