ಮಹೇಶ್ ತಿಮರೋಡಿಗೆ ತಾತ್ಕಾಲಿಕ ರಿಲೀಫ್

Public TV
1 Min Read

ಬೆಂಗಳೂರು: ಮಹೇಶ್ ತಿಮರೋಡಿಗೆ (Mahesh Shetty Thimarodi) ರಿಲೀಫ್ ಸಿಕ್ಕಿದ್ದು ಹಿಂದಿನ ಗಡಿಪಾರು ಆದೇಶವನ್ನು ಹೈಕೋರ್ಟ್ (High Court) ರದ್ದು ಮಾಡಿದೆ.

ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.

ಏನಿದು ಪ್ರಕರಣ?
ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶವನ್ನು ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Share This Article