ನ.20, 21ಕ್ಕೆ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ

Public TV
0 Min Read

ಬೆಂಗಳೂರು: ಇದೇ ಗುರುವಾರ ಹಾಗೂ ಶುಕ್ರವಾರ ಸಿಎಂ ಸಿದ್ದರಾಮಯ್ಯನವರು (CM Siddaramaiah) ಚಾಮರಾಜನಗರ (Chamarajanagar) ಹಾಗೂ ಮೈಸೂರು (Mysuru) ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ದಿನವೇ ತವರು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನ.20 ಹಾಗೂ ನ.21ರಂದು ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.ಇದನ್ನೂ ಓದಿ: ಪೋಕ್ಸೋ ಕೇಸ್ | ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗಲು BSY ಸೇರಿ 4 ಆರೋಪಿಗಳಿಗೆ ಸಮನ್ಸ್

ಗುರುವಾರ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ಶುಕ್ರವಾರ ರಾತ್ರಿ ಸಿದ್ದರಾಮಯ್ಯನವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Share This Article