ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯ (Red Fort) ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದ್ದು, ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಆದೇಶದ ಮೇರೆಗೆ ನಾಲ್ವರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ (Jammu Kashmir) ಶ್ರೀನಗರದಲ್ಲಿ ಎನ್‌ಐಎ ವಶಕ್ಕೆ ತೆಗೆದುಕೊಂಡಿದೆ.
ಕಾಶ್ಮೀರ ಪುಲ್ವಾಮಾ ಡಾ. ಮುಜಮ್ಮಿಲ್ ಶಕೀಲ್ ಗನೈ, ಅನಂತನಾಗ್‌ನ ಡಾ. ಅದೀಲ್ ಅಹ್ಮದ್ ರಾಥರ್, ಶೋಪಿಯಾನ್ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಮತ್ತು ಉತ್ತರ ಪ್ರದೇಶದ ಡಾ. ಶಾಹೀನ್ ಸಯೀದ್ ಬಂಧಿತ ಆರೋಪಿಗಳು. ದೆಹಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಈ ಆರೋಪಿಗಳು ಪ್ರಮುಖ ಪಾತ್ರ ವಹಿಸಿದ್ದರು.
ಈ ಹಿಂದೆ ಇಬ್ಬರು ಆರೋಪಿಗಳನ್ನು ಎನ್‌ಐಎ ಬಂಧಿಸಿತ್ತು. ಸ್ಫೋಟಕ್ಕೆ ಬಳಸಲಾದ ಕಾರನ್ನು ನೋಂದಾಯಿಸಲಾದ ಅಮೀರ್ ರಶೀದ್ ಅಲಿ ಮತ್ತು ತಾಂತ್ರಿಕ ನೆರವು ನೀಡಿದ ಜಾಸಿರ್ ಬಿಲಾಲ್ ವಾನಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

