Pakistan | ಅಂಟು ತಯಾರಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 15 ಕಾರ್ಮಿಕರು ಸಾವು, 7 ಮಂದಿಗೆ ಗಾಯ

1 Min Read

ಇಸ್ಲಾಮಾಬಾದ್: ಅಂಟು ತಯಾರಿಸುವ ಕಾರ್ಖಾನೆಯೊಂದರ (Glue Factory) ಬಾಯ್ಲರ್ ಸ್ಫೋಟಗೊಂಡ (Boiler Blast) ಪರಿಣಾಮ ಕನಿಷ್ಠ 15 ಕಾರ್ಮಿಕರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದ ಫೈಸಲಾಬಾದ್‌ನಲ್ಲಿ (Faisalabad) ನಡೆದಿದೆ.

ಘಟನೆ ಬಳಿಕ ಪೊಲೀಸರು ಕಾರ್ಖಾನೆ ವ್ಯವಸ್ಥಾಪಕರನ್ನು ಬಂಧಿಸಿದ್ದಾರೆ. ಸ್ಫೋಟದ ಬಳಿಕ ಕಾರ್ಖಾನೆ ಮಾಲೀಕ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಬಲೆಬೀಸಿದ್ದಾರೆ. ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿಕೆಶಿ

ಸ್ಫೋಟದ ತೀವ್ರತೆಗೆ ಕಾರ್ಖಾನೆ ಕಟ್ಟಡ ಮತ್ತು ಹತ್ತಿರದ ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ ಎಂದು ಸ್ಥಳೀಯ ಆಡಳಿತಾಧಿಕಾರಿ ರಾಜಾ ಜಹಾಂಗೀರ್ ಹೇಳಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭೂಕಂಪಕ್ಕೆ 6 ಮಂದಿ ಸಾವು – ಕೋಲ್ಕತ್ತಾ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವ

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಸ್ಲಾಂ ಹೇಳಿದ್ದಾರೆ. ಇದನ್ನೂ ಓದಿ: Haveri | ಪತ್ನಿ, ಅತ್ತೆ-ಮಾವನ ಕಿರುಕುಳ; ವೀಡಿಯೋ ಮಾಡಿಟ್ಟು ಪತಿ ನೇಣಿಗೆ ಶರಣು

ಇನ್ನು ಘಟನೆಗೆ ಪಾಕಿಸ್ತಾನ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಷರೀಫ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಜಗಳವಾಡುತ್ತ ಬೈಕ್‌ ಚಾಲನೆ – ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಯುವತಿ ಸಾವು, ಯುವಕನ ಸ್ಥಿತಿ ಗಂಭೀರ

Share This Article