– ಶಿವಸೇನಾ ನಾಯಕ ಪ್ರಮೋದ್ ಚೌಬೆ ಪತ್ನಿಗೆ ಗಾಯ
ಥಾಣೆ: ನಿಯಂತ್ರಣ ತಪ್ಪಿ ಕಾರೊಂದು ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharshtra) ಥಾಣೆ ಜಿಲ್ಲೆಯ ಅಂಬರನಾಥ್ ಫ್ಲೈಓವರ್ನಲ್ಲಿ (Ambarnath Flyover) ನಡೆದಿದೆ.
ಶುಕ್ರವಾರ ಸಂಜೆ 7:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿದ್ದ ಸವಾರರೊಬ್ಬರು ಗಾಳಿಯಲ್ಲಿ ಹಾರಿ ಫ್ಲೈಓವರ್ನ ಕೆಳಗಿನ ರಸ್ತೆಗೆ ಬಿದ್ದಿದ್ದಾರೆ. ಕಾರಿನ ಚಾಲಕನ ನಿಯಂತ್ರಣ ತಪ್ಪಿ ವಾಹನ ನಾಲ್ಕರಿಂದ ಐದು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ – ಆರೋಪಿ ಅರೆಸ್ಟ್
ಅಪಘಾತದಲ್ಲಿ ಶಿವಸೇನಾ ನಾಯಕ ಪ್ರಮೋದ್ ಚೌಬೆ ಅವರ ಚಾಲಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ ಪ್ರಮೋದ್ ಚೌಬೆ ಅವರ ಪತ್ನಿ ಸುಮನ್ ಚೌಬೆ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಡಿಕ್ಕಿಯಿಂದಾಗಿ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಮೃತರ ಗುರುತನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತದಲ್ಲಿ ಇತರ ಮೂವರು ವ್ಯಕ್ತಿಗಳು ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಂಬರನಾಥ್ನ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶೈಲೇಶ್ ಕಾಳೆ ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ

