ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ?- ಮಂಡ್ಯದಲ್ಲಿ ಗಿಣಿ ಶಾಸ್ತ್ರ ಕೇಳಿದ ಬಿಜೆಪಿ ಕಾರ್ಯಕರ್ತರು

1 Min Read

– ಚೊಂಬು ಇರುವ ಕಾರ್ಡ್ ತೆಗೆದ ಗಿಣಿ!

ಮಂಡ್ಯ: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ (D.K.Shivakumar) ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಕೆಶಿ ‘ಗಿಣಿ ಶಾಸ್ತ್ರ ಕೇಳಿ’ ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿಕೆಶಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಗಿಣಿ ಶಾಸ್ತ್ರ ಕೇಳಿ ಡಿಸಿಎಂಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸಿದ್ದು ಟೀಂನಿಂದಲೂ ನಂಬರ್‌ ಗೇಮ್?-‌ ರಹಸ್ಯವಾಗಿ ಶಾಸಕ ಪ್ರಸಾದ್‌ ಅಬ್ಬಯ್ಯ ಭೇಟಿಯಾದ ಯತೀಂದ್ರ

ಮಂಡ್ಯದ ನಗರಸಭೆ ಎದುರು ಗಿಳಿ ಶಾಸ್ತ್ರ ಕೇಳಲಾಯಿತು. ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ, ಇಲ್ವಾ ಎಂದು ಬಿಜೆಪಿಗರು ಶಾಸ್ತ್ರ ಕೇಳಿದರು. ಈ ವೇಳೆ ಚೊಂಬು ಇರುವ ಕಾರ್ಡ್‌ನ್ನು ಗಿಣಿ ತೆಗೆದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲ್ಲ. ಅವರ ಕೈಗೆ ಚೊಂಬು ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.

ಬಳಿಕ ಸಿದ್ದರಾಮಯ್ಯ (Siddaramaiah) ಸಿಎಂ ಆಗಿ ಮುಂದುವರಿದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದ್ದಾರೆ. ಈ ವೇಳೆ ಹೂ ಇರುವ ಕಾರ್ಡ್‌ನ್ನು ಗಿಣಿ ತೆಗೆದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಗ್ಯಾರಂಟಿ ಎಂದು ಬಿಜೆಪಿ ಕಾರ್ಯಕರ್ತರು ವಿಡಂಬನೆ ಮಾಡಿದ್ದಾರೆ.

Share This Article