Haveri | ಆಕಸ್ಮಿಕ ಬೆಂಕಿ – 4 ಲಕ್ಷ ಮೌಲ್ಯದ ಮೆಕ್ಕೆಜೋಳದ ರಾಶಿ ಭಸ್ಮ

1 Min Read

ಹಾವೇರಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ (Maize) ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬಸವನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ದ್ಯಾಮನಗೌಡ ನೀರಲಗಿ ಎಂಬವರಿಗೆ ಸೇರಿದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮವಾಗಿದೆ. 10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ರಾಶಿ ಸುಟ್ಟು ಭಸ್ಮವಾಗಿದ್ದು, 4 ಲಕ್ಷ ಮೌಲ್ಯದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್

Share This Article