ಮೆಕ್ಸಿಕೋಸಿಟಿ: ಅಮೆರಿಕ ಸುಂಕ ಸಮರದ (Tariff War) ಬೆನ್ನಲ್ಲೇ ಈಗ ಮೆಕ್ಸಿಕೋ (Mexico) ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ.
2026 ರಿಂದ ಭಾರತ, ಚೀನಾ (China) ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50% ಸುಂಕ ವಿಧಿಸುವ ಮಸೂದೆಗೆ ಅಲ್ಲಿನ ಮೇಲ್ಮನೆ ಒಪ್ಪಿಗೆ ನೀಡಿದೆ. ಮಸೂದೆಯು ಪರವಾಗಿ 76, ವಿರುದ್ಧವಾಗಿ 5 ಮಂದಿ ಸದಸ್ಯರು ಮತ ಚಲಾಯಿಸುವ ಮೂಲಕ ಮಸೂದೆ ಪಾಸ್ ಆಗಿದೆ.
ಡೊನಾಲ್ಡ್ ಟ್ರಂಪ್ ಅವರ ‘ಅಮೇರಿಕಾ ಫಸ್ಟ್’ ಕಾರ್ಯಸೂಚಿಯಂತೆಯೇ ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ (Claudia Sheinbaum) ಸ್ಥಳೀಯ ಉದ್ಯಮಕ್ಕೆ ಆದ್ಯತೆ ನೀಡಲು ಏಷ್ಯನ್ ಆಮದುಗಳ ಮೇಲೆ ಹೊಸ ಸುಂಕಗಳನ್ನು ವಿಧಿಸುತ್ತಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್
ಮೆಕ್ಸಿಕೋದೊಂದಿಗೆ ವ್ಯಾಪಾರ ಒಪ್ಪಂದವನ್ನು ಹೊಂದಿರದ ಏಷ್ಯನ್ ದೇಶಗಳ 1,400 ಕ್ಕೂ ಹೆಚ್ಚು ಉತ್ಪನ್ನಗಳ ಮೇಲೆ 5% ರಿಂದ 50% ವರೆಗಿನ ಸುಂಕ ವಿಧಿಸುವ ಮಸೂದೆಗೆ ಬುಧವಾರ ದೇಶದ ಸೆನೆಟ್ ಅಂತಿಮ ಅನುಮೋದನೆ ನೀಡಿತು.
ಕೆಳಮನೆಯಿಂದ ಮೊದಲೇ ಅಂಗೀಕರಿಸಲ್ಪಟ್ಟ ಈ ಮಸೂದೆ ಚೀನಾ, ಭಾರತ, ದಕ್ಷಿಣ ಕೊರಿಯಾ, ಥೈಲ್ಯಾಂಡ್ ಮತ್ತು ಇಂಡೋನೇಷ್ಯಾದಂತಹ ದೇಶಗಳಿಂದ ಬರುವ ಆಟೋ ಭಾಗಗಳು, ಜವಳಿ, ಪ್ಲಾಸ್ಟಿಕ್‌ಗಳು, ಬಟ್ಟೆ ಮತ್ತು ಉಕ್ಕಿನಂತಹ ಸರಕುಗಳ ಮೇಲೆ 50% ವರೆಗೆ ಸುಂಕ ಪರಿಣಾಮ ಬೀರುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಟೋಲ್ ವಿನಾಯಿತಿ

