ಹಾಸನ | ವಿದ್ಯುತ್ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು – ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

1 Min Read

ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ (Electric Shock) ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಹಾಸನದ (Hassan) ಕಾಟೀಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.

ಮೃತನನ್ನು ಬಿಹಾರ ಮೂಲದ ಬರಿಕುಲ್ (18) ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸಲೀಂ (17) ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಕಂಬವೇರಿ ವಿದ್ಯುತ್‌ ತಂತಿ ದುರಸ್ತಿ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರ್ಮಿಕರಿಗೆ ಶಾಕ್ ಹೊಡೆಯುತ್ತಿದ್ದಂತೆ ಇನ್ನುಳಿದ ಮೂರು ಕಾರ್ಮಿಕರು ಅಲ್ಲಿಂದ ಓಡಿ ಹೋಗಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಹೃದಯಾಘಾತ; ಜೀವ ಉಳಿಸಲು ಅಂಗಲಾಚಿದರೂ ನೆರವಿಗೆ ಬಾರದ ಜನ – ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

ಗಾಯಗೊಂಡ ಯುವಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಡಾವಣೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಟ್ಟ ಮಂಜಿಗೆ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 10 ಬಸ್‌ಗಳು, ಕಾರುಗಳ ನಡುವೆ ಡಿಕ್ಕಿ; ನಾಲ್ವರು ಸಾವು

Share This Article