ಧಾರವಾಡ: ರೈಲು ಹಳಿಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಡೆತ್‌ನೋಟ್ (Death Note) ಪತ್ತೆಯಾಗಿದೆ.
ಧಾರವಾಡದ (Dharwad) ಶಿವಗಿರಿ ಬಳಿಯ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಪಲ್ಲವಿ 2 ಡೆತ್ ನೋಟ್ ಬರೆದಿಟ್ಟಿದ್ದಾರೆ. ಆರೋಗ್ಯ ಸಮಸ್ಯೆ, ಕೌಟುಂಬಿಕ ಸಮಸ್ಯೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಇದನ್ನೂ ಓದಿ: ಭಗವದ್ಗೀತೆ ಬೋಧನೆ ಅಗತ್ಯ ಪುನರುಚ್ಚರಿಸಿದ ಹೆಚ್.ಡಿ. ಕುಮಾರಸ್ವಾಮಿ
ಘಟನೆ ಸಂಬಂಧ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ (Shashikumar) ಪ್ರತಿಕ್ರಿಯಿಸಿ, ನೇಮಕಾತಿ ವಿಳಂಬ ಕಾರಣಕ್ಕೆ ಪಲ್ಲವಿ ಸಾವನ್ನಪ್ಪಿಲ್ಲ, ವಿದ್ಯಾರ್ಥಿಗಳ ಮನಸ್ಥೈರ್ಯ ಕುಗ್ಗಿಸುವ ಕೆಲಸ ಯಾರು ಮಾಡಬಾರದು. ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

