ಬೈಕ್‌ಗೆ ಬುಲೆರೋ ಡಿಕ್ಕಿ – ಮೂವರು ಯುವಕರ ದುರಂತ ಅಂತ್ಯ

0 Min Read

ಕೊಪ್ಪಳ: ಬೈಕ್‌ಗೆ ಬುಲೆರೋ ವಾಹನ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ಕೊಪ್ಪಳ (Koppal)  ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ.

ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share This Article