ಕಳಸ| ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಪ್ರವಾಸಿಗರ ಬಸ್ ಪಲ್ಟಿ, ಹಲವರಿಗೆ ಗಾಯ

1 Min Read

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು (Bus) ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳಸ (Kalasa) ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ (Bengaluru) ಹೊರನಾಡಿಗೆ (Horanadu) ಪ್ರವಾಸಕ್ಕೆಂದು ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಹಲವು ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಸರ್ಕಾರಿ ನೌಕರರು ಮುಜುಗರದ ಡ್ರೆಸ್ ಧರಿಸುವಂತಿಲ್ಲ; ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ

ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ರಸ್ತೆಗಳು ತಿರುವಿನಿಂದ ಕೂಡಿದ್ದು ಪ್ರವಾಸಿ ವಾಹನಗಳು ಎಚ್ಚರಿಕೆಯಿಂದ ಚಾಲನೆ ಮಾಡಬೇಕಿದೆ. ಇದನ್ನೂ ಓದಿ: ಕೋಳಿ ಅಂಕ ನಿಲ್ಲಬಾರದು – ಅರೆಸ್ಟ್‌ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಶಾಸಕ ಅಶೋಕ್‌ ರೈ

ಚಳಿಗಾಲದ ಕಾರಣ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣವಿರುವ ಕಾರಣ ತಿರುವುಗಳಲ್ಲಿ ರಸ್ತೆಗಳು ಸ್ಪಷ್ಟವಾಗಿ ಗೋಚರಿಸದೇ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಬೇರೆ ಜಿಲ್ಲೆಗಳಿಂದ ಕಾಫಿನಾಡಿಗೆ ಬರುವ ಪ್ರವಾಸಿಗರು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ಸ್ಥಳಿಯರು ಮನವಿ ಮಾಡಿದ್ದಾರೆ.
Share This Article