ಬಾಂಗ್ಲಾದಲ್ಲಿ ಮತ್ತೊಬ್ಬ ಯುವ ನಾಯಕನ ತಲೆಗೆ ಗುಂಡೇಟು

1 Min Read

ಢಾಕಾ: ಬಾಂಗ್ಲಾದೇಶದಲ್ಲಿ(Bangladesh) ಮತ್ತೊಮ್ಮ ಯುವ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ಬಾಂಗ್ಲಾದೇಶವು ವಿದ್ಯಾರ್ಥಿ ನೇತೃತ್ವದ ರಾಷ್ಟ್ರೀಯ ನಾಗರಿಕ ಪಕ್ಷದ (NCP) ಹಿರಿಯ ನಾಯಕನ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ (Shootout) ನಡೆಸಿದ್ದಾರೆ.

ಮುಹಮ್ಮದ್ ಮೊಟಲೆಬ್ ಸಿಕ್ದಾರ್‌ ಮೇಲೆ ಗುಂಡಿನ ದಾಳಿ ನಡೆದಿದೆ. ಸೋಮವಾರ ಬೆಳಿಗ್ಗೆ 11:45 ರ ಸುಮಾರಿಗೆ ನಗರದ ಸೋನದಂಗಾ ಪ್ರದೇಶದ ಮನೆಗೆ ನುಗ್ಗಿ ತಲೆಗೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ನಾಯಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಇಂಕಿಲಾಬ್ ಮಂಚ್ ವಕ್ತಾರ ಉಸ್ಮಾನ್ ಹಾದಿ ಹತ್ಯೆಯಾದ ಬೆನ್ನಲ್ಲೇ ಭಾರೀ ಹಿಂಸಾಚಾರ ನಡೆದಿತ್ತು. ಈಗ ಮತ್ತೊಬ್ಬ ನಾಯಕನ ಮೇಲಿನ ಗುಂಡಿನ ದಾಳಿಯಿಂದ ಹಿಂಸಾಚಾರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಶೀಘ್ರದಲ್ಲೇ ಖುಲ್ನಾದಲ್ಲಿ ಕಾರ್ಮಿಕ ಕಾರ್ಯಕ್ರಮದಲ್ಲಿ ಆಯೋಜಿಸಲು ಸಿದ್ಧತೆ ನಡೆಸುತ್ತಿದ್ದಾಗ ಈ ದಾಳಿ ನಡೆದಿದೆ. ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Share This Article