ದಾವಣಗೆರೆ / ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ (Student) ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಶಿವಮೊಗ್ಗ ನಗರದ ಪ್ರೇಮ್ ಕುಮಾರ್ (17) ಎಂದು ಗುರುತಿಸಲಾಗಿದೆ. ಈತ ಸ್ನೇಹಿತರ ಜೊತೆ ಪಿಳ್ಳಂಗಿರಿಯ ದೇವಸ್ಥಾನಕ್ಕೆ ತೆರಳಿದ್ದ. ವಾಪಾಸ್ ಆಗುವಾಗ ಸ್ನೇಹಿತರ ಜೊತೆ ಈಜಲು ನದಿಗೆ ಇಳಿದಿದ್ದ. ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸಾಗರ | ರೈಲ್ವೇ ಹಳಿಗೆ ಹಾರಿ ಆತ್ಮಹತ್ಯೆ ಯತ್ನ – ರೈಲು ನಿಲ್ಲಿಸಿ ರಕ್ಷಣೆಗೆ ಧಾವಿಸಿದ ಲೋಕೋ ಪೈಲಟ್
ಪ್ರೇಮ್ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಜೈಲು ಸಿಬ್ಬಂದಿಯಿಂದ ದಿಢೀರ್ ದಾಳಿ – ಮೊಬೈಲ್, ಸಿಮ್, ಇಯರ್ ಫೋನ್ ಪತ್ತೆ

