ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು (Mallikarjun Kharge) ಗೊಂದಲವನ್ನು ಇಲ್ಲೇ ಬಗೆಹರಿಸಿಕೊಳ್ಳಬೇಕೆಂದು ಹೇಳಿದ ಮೇಲೆ ಇಲ್ಲೇ ಬಗೆಹರಿಸಿಕೊಳ್ಳಬೇಕು ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅವರು, ಖರ್ಗೆಯವರು ಹೇಳಿದ ಮೇಲೆ ಅದಕ್ಕೆ ನಾವು ಗೌರವ ಕೊಡುತ್ತೇವೆ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ, ಯಾವ ಸೂಚನೆ ಕೊಡುತ್ತಾರೋ ಗೊತ್ತಿಲ್ಲ. ಅವರು ಇಲ್ಲೇ ಗೊಂದಲ ಬಗೆಹರಿಸಿಕೊಳ್ಳಬೇಕು ಅಂತ ಹೇಳಿದ್ದಾರೆ. ಹಾಗೆ ಹೇಳಿದ ಮೇಲೆ ಇಲ್ಲೇ ಗೊಂದಲ ಬಗೆಹರಿಸಿಕೊಳ್ಳಬೇಕು. ಇದನ್ನು ಖರ್ಗೆಯವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ನನ್ನ ದೃಷ್ಟಿಯಲ್ಲಿ ಗೊಂದಲ ಇರಬಾರದು. ಗೊಂದಲ ಇದ್ರೆ ಅದನ್ನು ಬಗೆಹರಿಸಿಕೊಂಡು ಆಡಳಿತ ಕೊಡಬೇಕು ಎಂದರು. ಇದನ್ನೂ ಓದಿ: ಚಿರತೆ ದಾಳಿಗೆ ಹಸು ಸಾವು – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಇನ್ನು, ಸರ್ಕಾರದ ಗೊಂದಲ ಆಡಳಿತದ ಮೇಲೂ ಪರಿಣಾಮ ಬೀರಬಹುದು. ಪಕ್ಷದ ಒಳಗಿನ ಗೊಂದಲದಿಂದ ಅಧಿಕಾರಿಗಳಿಗೆ ಗೊಂದಲ ಆಗೋದು ಸಹಜ. ಗೊಂದಲ ಬಗೆಹರಿಸಿ ಅಧಿಕಾರಿಗಳಿಗೂ ಸಂದೇಶ ಕೊಡಬೇಕು. ಗೊಂದಲ ಬಗೆಹರಿಸಿ ಜನರಿಗೂ ನಾವು ಕೊಟ್ಟಿರುವ ಭರವಸೆ ಈಡೇರಿಸುವತ್ತ ಗಮನ ಕೊಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಪಾರಿವಾಳ ನೋಡುವಾಗ ಆಯತಪ್ಪಿ ಬಿದ್ದ 6ರ ಬಾಲಕ


