ನರೇಗಾ ರದ್ದತಿ ವಿರುದ್ಧ ದೇಶದ್ಯಾಂತ ಹೋರಾಟಕ್ಕೆ ಕಾಂಗ್ರೆಸ್‌ ತೀರ್ಮಾನ

1 Min Read

ನವದೆಹಲಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNAREGA) ರದ್ದತಿಯ ವಿರುದ್ಧ ದೇಶಾದ್ಯಂತ ಅಭಿಯಾನ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. ಜನವರಿ 5 ರಿಂದ ಎಲ್ಲ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಸೂಚನೆ ನೀಡಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿ ಇಂದಿರಾ ಭವನದಲ್ಲಿ (Indira Bhawan) ನಡೆದ ಕಾಂಗ್ರೆಸ್‌ ಕಾರ್ಯಕಾರಣಿ ಸಭೆ ಉದ್ದೇಶಿಸಿ ಮಾತನಾಡಿದ ಖರ್ಗೆ, ನರೇಗಾ ಕೇವಲ ಒಂದು ಯೋಜನೆಯಲ್ಲ, ಬದಲಾಗಿ ಸಾಂವಿಧಾನಿಕವಾಗಿ ಖಾತರಿಪಡಿಸಿದ ಕೆಲಸ ಮಾಡುವ ಹಕ್ಕು. ಅದನ್ನು ದುರ್ಬಲಗೊಳಿಸುವುದು ಅಥವಾ ತೆಗೆದುಹಾಕುವುದು ಬಡವರು ಮತ್ತು ಕಾರ್ಮಿಕರ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಆಘಾಟ್‌ 3.0 – ದೆಹಲಿ ಪೊಲೀಸರಿಂದ 600ಕ್ಕೂ ಹೆಚ್ಚು ಮಂದಿ ಬಂಧನ

ಮನರೇಗಾ ಕಾಯ್ದೆಯನ್ನ ರಕ್ಷಣೆ ಮಾಡಬೇಕು ಈ ಹಿನ್ನಲೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕು. ಅದಕ್ಕಾಗಿ ಪಕ್ಷವು ಈ ವಿಷಯವನ್ನು ಸಾರ್ವಜನಿಕವಾಗಿ ಚರ್ಚಿಸಬೇಕಿದೆ ಕಾಂಗ್ರೆಸ್ ಈ ವಿಷಯದ ಬಗ್ಗೆ ಮೌನವಾಗಿರುವುದಿಲ್ಲ ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆಯನ್ನು ಮುಂದುವರಿಸುತ್ತದೆ ಎಂದು ಖರ್ಗೆ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳಿಗೆ ಸಭೆಯಲ್ಲಿ ರಾಹುಲ್ ಗಾಂಧಿ (Rahul Gandhi) ಬೆಂಬಲಿಸಿದ್ದಾರೆ.

ಇದೇ ಸಭೆಯಲ್ಲಿ ಮುಂಬರುವ ಐದು ರಾಜ್ಯಗಳ ಚುನಾವಣೆ, ವೋಟ್‌ ಚೋರಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ಸಭೆಯಲ್ಲಿ ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: PUBLiCTV Explainer: ಮಹಾಗ್ನಿಯನ್ನೇ ಹುದುಗಿಸಿಟ್ಟುಕೊಂಡ ಹಿಮಾಲಯ – ಭಾರತಕ್ಕೆ ಕಂಟಕವಾಗುತ್ತಾ?

Share This Article