ಬೆಂಗಳೂರು | ಪ್ರತಿಷ್ಠಿತ ಕಂಪನಿಯ 6ನೇ ಮಹಡಿಯಿಂದ ಬಿದ್ದು ಯುವಕ ಸಾವು

1 Min Read

ಬೆಂಗಳೂರು: ಪ್ರತಿಷ್ಠಿತ ಔಷಧ ತಯಾರಿಕ ಕಂಪನಿಯ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ (Bengaluru) ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಅನಂತ್ ಕುಮಾರ್ ಮೃತ ದುರ್ದೈವಿಯಾಗಿದ್ದಾನೆ. ಇಂದು (ಡಿ.30) ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ – ಓರ್ವ ಸಾವು, ಮೂವರಿಗೆ ಗಾಯ

ಪರಪ್ಪನ ಅಗ್ರಹಾರ (Parappana Agrahara) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಿತೆಯ ಜೊತೆ ಏನು ಸಂಭಾಷಣೆ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು

Share This Article