ಬೆಂಗಳೂರು: ಕಲಬುರಗಿ (Kalaburagi) ಜಿಲ್ಲೆಗೆ ಮೆಗಾ ಬಂಪರ್ ಸಿಕ್ಕಿದ್ದು, 50 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ, 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ ನಿರ್ಮಾಣಕ್ಕೆ ಒಪ್ಪಿಗೆ, ಕಲಬುರಗಿ ನಗರದಲ್ಲಿ ಮಹಾತ್ಮಗಾಂಧಿ, ಜವಾಹರ್ ಲಾಲ್ ನೆಹರು ಇಂದಿರಾಗಾಂಧಿ, ರಾಜೀವ್ ಗಾಂಧಿ ಪುತ್ಥಳಿಗಳ ಸ್ಥಾಪನೆಗೆ ರಾಜ್ಯ ಸಂಪುಟ (Cabinet) ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇನ್ನು ರಾಜ್ಯದ 31 ಜಿಲ್ಲೆ, 5 ಪೊಲೀಸ್ ಆಯುಕ್ತಾಲಯಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಅಲ್ಲದೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಇರುವ 33 ಜೀವಾವಧಿ ಶಿಕ್ಷಾ ಬಂಧಿಗಳನ್ನ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಲು ಕ್ಯಾಬಿನೆಟ್ ಸಮ್ಮತಿಸಿದ್ದು, ಆರ್ಮ್ಸ್ ಆಕ್ಟ್‌ಗೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಇಬ್ಬರು ಬಂಧಿಗಳ ಬಿಡುಗಡೆಗೆ ಕೇಂದ್ರದ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಜಿ ರಾಮ್ ಜಿ ಕಾಯ್ದೆ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್, ಜನತಾ ನ್ಯಾಯಾಲಯದಲ್ಲಿ ಹೋರಾಟಕ್ಕೆ ಕ್ಯಾಬಿನೆಟ್ ತೀರ್ಮಾನ
ಇನ್ನುಳಿದಂತೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಶಿರಾ ತಾಲೂಕಿನಲ್ಲಿ ಏಳೂವರೆ ಗುಂಟೆ, ಸಿರವಾರ ತಾಲ್ಲೂಕಿನಲ್ಲಿ 10 ಗುಂಟೆ ಜಮೀನು ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣ ಫೆಬ್ರವರಿ, ಮಾರ್ಚ್ ತಿಂಗಳ ಹಣ: ಲಕ್ಷ್ಮೀ ಹೆಬ್ಬಾಳ್ಕರ್

