SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌- 8 ಮಂದಿ ಅರೆಸ್ಟ್‌

1 Min Read

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ (SSLC Preparatory Exam) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು (Teacher), ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀರಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ (Cyber Police Station) ಎಫ್‌ಐಆರ್‌ ದಾಖಲಾಗಿತ್ತು.

ತನಿಖೆಗೆ ಇಳಿದ ಪೊಲೀಸರು ಹೆಡ್ ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ. ಇದನ್ನೂ ಓದಿ: ಆಕ್ಸಿಡೆಂಟ್ ವಲಯವಾಗುತ್ತಿದೆ ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್!

ಈಗ ಪೊಲೀಸರು ಪ್ರಶ್ನೆಪತ್ರಿಕೆಯನ್ನು ವೈರಲ್ ಮಾಡಿದವರ ವಾಟ್ಸಪ್‌, ಇನ್‌ಸ್ಟಾ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ.

ಬಂಧಿತರು ಯಾರು?
ಗಿರೀಶ್ ವಿ.ಡಿ – ಮುಖ್ಯೋಪಾಧ್ಯಾಯ(ತುಮಕೂರು)
ಅಮ್ಜದ್ ಖಾನ್ – ಸಹ ಶಿಕ್ಷಕ(ರಾಮನಗರ)
ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ(ಕಲಬುರಗಿ)
ಫಾಹ್ಮಿದಾ – ಸಹ ಶಿಕ್ಷಕಿ(ಕಲಬುರಗಿ)
ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ(ಕಲಬುರಗಿ)
ಫರ್ಜಾನಾ ಬೇಗಂ – ಶಿಕ್ಷಕಿ(ಕಲಬುರಗಿ)

Share This Article