ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್

1 Min Read

ನವದೆಹಲಿ: ಕರೂರು ಕಾಲ್ತುಳಿತ (Karur Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ (TVK) ಪಕ್ಷದ ಅಧ್ಯಕ್ಷ, ನಟ ವಿಜಯ ದಳಪತಿ (Vijay Thalapathy) ಸೋಮವಾರ (ಜ.12) ಸಿಬಿಐ ಎದುರು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು 7 ಗಂಟೆಗೂ ಹೆಚ್ಚು ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿಜಯ್‌ಗೆ ಸಿಬಿಐ (CBI) ಅಧಿಕಾರಿಗಳು ಸುಮಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಸುಮಾರು ಏಳು ತಾಸಿಗೂ ಅಧಿಕ ಕಾಲ ನಿರಂತರವಾಗಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ವಿಜಯ್ ಕಾಲ್ತುಳಿತಕ್ಕೆ ತಮ್ಮ ಪಕ್ಷ ಹಾಗೂ ಪಕ್ಷದ ಕಾರ್ಯಕರ್ತರು ಕಾರಣರಲ್ಲ. ಜೊತೆಗೆ ಕಾಲ್ತುಳಿತದ ಬಳಿಕವೂ ನಾನು ಅಲ್ಲೇ ಇರುವುದು ಇನ್ನಷ್ಟು ಜನರಿಗೆ ತೊಂದರೆಯಾಗಬಹುದು ಅಥವಾ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂಬ ಕಾರಣಕ್ಕೆ ನಾನು ಅಲ್ಲಿಂದ ತೆರಳಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕರೂರು ಕಾಲ್ತುಳಿತ ಕೇಸಲ್ಲಿ ವಿಜಯ್‌ಗೆ ಶಾಕ್‌; ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್‌

ಇದೇ ವೇಳೆ ವಿಜಯ್ ಕೊಟ್ಟ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿದ್ದಾರೆ. ವಿಜಯ್ ಆಗಮನದ ಹಿನ್ನೆಲೆ ಸಿಬಿಐ ಕಚೇರಿ ಎದುರು ಭಾರಿ ಭದ್ರತೆ ಏರ್ಪಡಿಸಲಾಗಿತ್ತು. ಆದಾಗ್ಯೂ, ವಿಜಯ್ ಅಭಿಮಾನಿಗಳು ಪ್ರತಿಭಟನೆ ಮಾಡಿ, ಗೊಂದಲ ಸೃಷ್ಟಿಪಡಿಸಿದರು. ವಿಚಾರಣೆಗೆ ಹಾಜರಾಗಲು ಟಿವಿಕೆ ವಿಜಯ್ ಸೋಮವಾರ (ಜ.12) 10:30ರ ಸುಮಾರಿಗೆ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ಆಗಮಿಸಿದರು.

ಕಳೆದ ವರ್ಷ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಪಕ್ಷದಿಂದ ಆಯೋಜಿಸಿದ್ದ ರ‍್ಯಾಲಿಯಲ್ಲಿ 41 ಮಂದಿ ಸಾವನ್ನಪ್ಪಿದ್ದರು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಸುಪ್ರೀಂಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಈ ಮಧ್ಯೆ, ಜನನಾಯಗನ್ ಸಿನಿಮಾ ಬಿಡುಗಡೆ ಕೋರಿ ಚಿತ್ರದ ನಿರ್ಮಾಪಕರು ಕೋರ್ಟ್ ಮೊರೆ ಹೋಗಿದ್ದಾರೆ. ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ತುರ್ತು ವಿಚಾರಣೆ ಕೈಗೊಳ್ಳುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.ಇದನ್ನೂ ಓದಿ:ಕಾಲ್ತುಳಿತಕ್ಕೆ ಪೊಲೀಸರು ಹೊಣೆ – ಪತ್ರ ಬರೆದು ವಿಜಯ್‌ ಅಭಿಮಾನಿ, ಟಿವಿಕೆ ಕಾರ್ಯಕರ್ತ ಆತ್ಮಹತ್ಯೆ

Share This Article