-ಗ್ರಾ.ಪಂ, ಗುತ್ತಿಗೆದಾರನ ವಿರುದ್ದ ಗ್ರಾಮಸ್ಥರ ಆಕ್ರೋಶ
ರಾಯಚೂರು: ಅರೆಬರೆ ಕಾಮಗಾರಿ ಮಾಡಿದ್ದ ಚರಂಡಿಯಲ್ಲಿ ಬಿದ್ದು ವೃದ್ಧೆ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯವೇ ವೃದ್ಧೆ ಸಾವಿಗೆ ಕಾರಣ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ.
ಮೃತರನ್ನು 60 ವರ್ಷದ ಗಂಗಮ್ಮ ಆರೋಲಿ ಎಂದು ಗುರುತಿಸಲಾಗಿದ್ದು, ಗ್ರಾಮದ ಚರ್ಚ್ ಮುಂಭಾಗದಲ್ಲಿರುವ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿಗೆ
ಚರಂಡಿಯ ಕೆಲವು ಕಡೆ ಗುಂಡಿಗಳನ್ನು ಮುಚ್ಚದೇ ಹಾಗೆಯೇ ತೆರೆದಿಟ್ಟಿದ್ರು. ಮೂರು ತಿಂಗಳು ಕಳೆದರೂ ಕಾಲುವೆ ಕಾಮಗಾರಿ ಅರೆಬರೆ ಮಾಡಿಬಿಟ್ಟಿದ್ದರು. ಹಲವು ಬಾರಿ ಗುತ್ತಿಗೆದಾರರಿಗೆ ಕಾಮಗಾರಿ ಮುಗಿಸಲು ತಿಳಿಸಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ.
ಕುರ್ಡಿ ಗ್ರಾ.ಪಂ ಪಿಡಿಓ ಮತ್ತು ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ- ಕ್ರಮಕ್ಕೆ ಜೆಡಿಎಸ್ ಒತ್ತಾಯ

