ದೆಹಲಿ | ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಶಾರ್ಪ್‌ಶೂಟರ್ಸ್ ಅರೆಸ್ಟ್‌ -‌ ಓರ್ವನಿಗೆ ಗುಂಡೇಟು

1 Min Read

ನವದೆಹಲಿ: ಉತ್ತರ ದೆಹಲಿಯಲ್ಲಿ (Delhi) ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಇಬ್ಬರು‌ ಶಾರ್ಪ್‌ಶೂಟರ್‌ಗಳನ್ನು ಪೊಲೀಸರು (Police) ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳು ಹಾಗೂ ಪೊಲೀಸರು ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾರ್ಪ್‌ಶೂಟರ್‌ಗಳು ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಶೂಟರ್‌ನ ಕಾಲಿಗೆ ಗುಂಡು ತಗುಲಿದೆ. ಕಾನ್ಸ್ಟೆಬಲ್‌ ಒಬ್ಬರ ಬುಲೆಟ್‌ ಪ್ರೂಫ್‌ ಜಾಕೆಟ್‌ಗೆ ಗುಂಡು ತಗುಲಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿಗೆ

ಇತ್ತೀಚೆಗೆ ದೆಹಲಿಯ ಹೊರವಲಯದ ಜಿಮ್‌ನಲ್ಲಿ ನಡೆದ ಗುಂಡಿನ ದಾಳಿ ಮತ್ತು ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಉದ್ಯಮಿಯೊಬ್ಬರ ಮೇಲೆ ನಡೆದ ದಾಳಿಯಲ್ಲಿ ಈ ಇಬ್ಬರು ಭಾಗಿಯಾಗಿದ್ದಾರೆ. ಅಲ್ಲಿ ಹಣ ವಸೂಲಿ ಮಾಡಲು ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಈ ಇಬ್ಬರು ದೆಹಲಿಯ ಹಿರಾಂಕಿ ಮೋರ್ ಬಳಿ ಬರುತ್ತಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ತೆರಳಿದ್ದರು.

ಪೊಲೀಸರ ದಾಳಿ ವೇಳೆ ಶೂಟರ್ಸ್‌ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಸಹ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಗಾಯಗೊಂಡಿದ್ದು, ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸಹಚರನನ್ನು ಸ್ಥಳದಲ್ಲೇ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಎರಡು ಪಿಸ್ತೂಲ್‌ಗಳು ಮತ್ತು ಜೀವಂತ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ | ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರು ನೇಣಿಗೆ ಶರಣು

Share This Article