ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್ – ಕ್ರಮಕ್ಕೆ ಸಿಎಂಗೆ ಜೆಡಿಎಸ್ ಒತ್ತಾಯ

1 Min Read

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ (DGP Ramachandra Rao) ರಾಸಲೀಲೆ ಪ್ರಕರಣದಲ್ಲಿ ಕೂಡಲೇ ಸಿಎಂ ಸಿದ್ದರಾಮಯ್ಯ (CM Siddaramaiah) ರಾಮಚಂದ್ರ ರಾವ್  ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜೆಡಿಎಸ್ (JDS) ಆಗ್ರಹ ಮಾಡಿದೆ.

ಈ ಸಂಬಂಧ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರೋ ಜೆಡಿಎಸ್, ಗೃಹ ಸಚಿವ ಪರಮೇಶ್ವರ್ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಶಿಷ್ಟಾಚಾರ ಮುರಿದು ವಿಮಾನ ನಿಲ್ದಾಣಕ್ಕೆ ತೆರಳಿ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಮೋದಿ

ಜೆಡಿಎಸ್ ಎಕ್ಸ್‌ನಲ್ಲಿ ಏನಿದೆ?
ಗೃಹ ಸಚಿವ ಪರಮೇಶ್ವರ್ ಅವರ ಆಪ್ತ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಬಯಲಾಗಿದ್ದು, ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಪೊಲೀಸ್ ಸಮವಸ್ತ್ರದ ಘನತೆ ಮರೆತು, ಕಚೇರಿಯಲ್ಲೇ ಮಹಿಳೆಯರೊಂದಿಗೆ ಇಂತಹ ಕೃತ್ಯ ಎಸಗಿರುವುದು ಅಕ್ಷಮ್ಯ ಅಪರಾಧ. ಇದನ್ನೂ ಓದಿ: ತಿರುಚಿದ ವಿಡಿಯೋ ಎಂದ ಡಿಜಿಪಿ – ಭೇಟಿಗೆ ಅನುಮತಿ ನೀಡದ ಪರಮೇಶ್ವರ್‌

ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನೆರವು ನೀಡಿದ ಆರೋಪವೂ ಸಹ ಡಿಜಿಪಿ ರಾಮಚಂದ್ರ ರಾವ್ ಮೇಲಿತ್ತು. ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ಹಾಗೂ ಅಸಮರ್ಥ ಗೃಹ ಸಚಿವ ಪರಮೇಶ್ವರ್ ಅವರಿಂದ ನಮ್ಮ ರಾಜ್ಯದ ಹೆಮ್ಮೆಯ ಪೊಲೀಸ್ ಇಲಾಖೆಯ ಮಾನ ಮತ್ತೊಮ್ಮೆ ಹರಾಜಾಗಿದೆ. ಇದನ್ನೂ ಓದಿ: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ. ಇದನ್ನೂ ಓದಿ:  ರಾಮಚಂದ್ರ ರಾವ್ ರಾಸಲೀಲೆ ಕೇಸ್‌ – ಗೃಹ ಇಲಾಖೆಗೆ ವರದಿ ನೀಡಲು ಸಿಎಂ ಸೂಚನೆ

Share This Article