ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು – ಸಾರ್ವಜನಿಕರಿಗೆ ಎಚ್ಚರಿಕೆ

1 Min Read

ಶಿವಮೊಗ್ಗ: ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನದಿಯ ಬಳಿ ಸಾರ್ವಜನಿಕರು ಓಡಾಡುವುದನ್ನು ನಿಷೇಧಿಸಲಾಗಿದೆ.

ಜ.20 ರಿಂದ ಜ.30ರ ವರೆಗೂ ಪ್ರತಿ ದಿನ 500 ಕ್ಯೂಸೆಕ್ ಹಾಗೂ ಜ. 31 ರಂದು 300 ಕ್ಯೂಸೆಕ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌

ಈ ಅವಧಿಯಲ್ಲಿ ನದಿಯ ಬಳಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು ನೀರೆತ್ತುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Share This Article