ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಮೆಸೇಜ್ – ಯುವತಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ ಆರೋಪಿ ಅರೆಸ್ಟ್

1 Min Read

– ಇನ್‌ಸ್ಟಾದಲ್ಲಿ ಕಾಟ ಕೊಡ್ತಿದ್ದ ಪಾಗಲ್ ಪ್ರೇಮಿ

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನಗಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ. ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Share This Article