ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಾಕ್ – FIR ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

1 Min Read

ಬೆಂಗಳೂರು: ಶಿಡ್ಲಘಟ್ಟ (Sidlaghatta) ಪೌರಾಡಳಿತ ಆಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ (Rajeev Gowda) ಬಿಗ್ ಶಾಕ್ ಎದುರಾಗಿದೆ. ಎಫ್‌ಐಆರ್ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಪ್ರಕರಣದ ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ನ್ಯಾ. ನಾಗಪ್ರಸನ್ನ ಪೀಠದಿಂದ ಆದೇಶ ಹೊರಬಿದ್ದಿದೆ. ಪ್ರಕರಣ ದಾಖಲಾದ ದಿನದಿಂದ ರಾಜೀವ್ ಗೌಡ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ರಾಜೀವ್‌ ಗೌಡ ನಟೋರಿಯಸ್‌ ಕ್ರಿಮಿನಲ್‌, 16 ಕೇಸ್‌ ಇದೆ – ಶೀಘ್ರ ಬಂಧನ: ಎಸ್ಪಿ

ಚಿಂತಾಮಣಿ ನಗರದ ಚಿಕ್ಕಬಳ್ಳಾಪುರ ಜಿಲ್ಲಾ ಎರಡನೇ ಅಪರ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ರಾಜೀವ್ ಗೌಡ ವಿರುದ್ಧ 2 ಎಫ್‌ಐಆರ್ ದಾಖಲಾಗಿವೆ. ಎರಡೂ ಎಫ್‌ಐಆರ್ ರದ್ದತಿಗೆ ಕೋರ್ಟ್ ನಕಾರ ವ್ಯಕ್ತಪಡಿಸಿದೆ.

Share This Article