ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ

1 Min Read

-ಬೈಕ್ ಟ್ಯಾಕ್ಸಿ ನಿಷೇಧ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ (Bike Taxi) ಅವಕಾಶ ನೀಡಿ ಹೈಕೋರ್ಟ್ (High Court) ಆದೇಶ ಹೊರಡಿಸಿದೆ.

ಬೈಕ್ ಟ್ಯಾಕ್ಸಿ ನಿಷೇಧ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮುಖ್ಯಪೀಠ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ಜಾಗರೂಕತೆಯ ಬಗ್ಗೆ ನಿಯಮಾವಳಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೆರಿಕ

ಕಳೆದ ವರ್ಷ ಏಪ್ರಿಲ್‌ನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಬ್ರೇಕ್ ಹಾಕಲಾಗಿತ್ತು. ಜೂನ್‌ನಲ್ಲಿ ಟ್ಯಾಕ್ಸಿ ಅಗ್ರಿಗೇಟರ್‌ಗಳಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ಮುಖ್ಯ ನ್ಯಾ.ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠ ಆದೇಶ ರದ್ದುಗೊಳಿಸಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿದೆ. ಇದನ್ನೂ ಓದಿ: ದೆಹಲಿ ಸೇರಿ NCR ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ

Share This Article