ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

1 Min Read

ಚಿಕ್ಕಮಗಳೂರು: ಆಲ್ದೂರು (Aldur) ಬಳಿ ಪ್ರವಾಸಿ ವಾಹನ ಡಿಕ್ಕಿಯಾಗಿ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ವಾಹನ ನಿಲ್ಲಿಸದೇ (Hit And Run) ಚಾಲಕ ಪರಾರಿಯಾಗಿದ್ದಾನೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದೆ. ಇವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ – ಮರಕ್ಕೆ ಡಿಕ್ಕಿಯಾಗಿ ಓರ್ವ ದುರ್ಮರಣ

ಅಪಘಾತ ಎಸಗಿದ ವಾಹನ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಿಂದ ಮಹಿಳೆ ಸಾವನ್ನಪ್ಪಿದ ಹಿನ್ನೆಲೆ, ಆಲ್ದೂರು ಹೋಬಳಿಯಲ್ಲಿನ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ

Share This Article