ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

1 Min Read

ಯಾದಗಿರಿ: ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿಯ ವೀರಭದ್ರೇಶ್ವರ ಕಾಲೋನಿಯಲ್ಲಿ ನಡೆದಿದೆ.

ಸದಾಶಿವರಡ್ಡಿ ರೊಟ್ನಡಗಿ ಅವರಿಗೆ ಸೇರಿದ ಶರಣಬಸವೇಶ್ವರ ಟ್ರೇಡಿಂಗ್ ಶಾಪ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಗೆ ಪೈಪ್‌ಗಳು ಸುಟ್ಟು ಕರಕಲಾಗಿವೆ. ಸುಮಾರು 10 ಲಕ್ಷ ರೂ.ಗೂ ಅಧಿಕ ವೆಚ್ಚದ ಪೈಪ್‌ಗಳು ಭಸ್ಮವಾಗಿದೆ. ಇದನ್ನೂ ಓದಿ: ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣಿಸಿದವರಿಗೆ ಬಿಸಿ – 6.34 ಲಕ್ಷ ದಂಡ ವಸೂಲಿ

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article