25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ

1 Min Read

– ಮುಂದಿನ ಆದೇಶದ ತನಕ ಎಲ್ಲರಿಗೂ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ

ಬೆಂಗಳೂರು: 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ ಅನ್ವಯವಾಗುವಂತೆ ನಿಗಮ ಮಂಡಳಿ ಅಧ್ಯಕ್ಷರ ಅಧಿಕಾರವಧಿ ಮುಂದುವರಿಕೆ ಮಾಡಲಾಗಿದೆ.

2024ರ ಜ.26ರಂದು ನಿಗಮ ಮಂಡಳಿ ಅಧ್ಯಕ್ಷರನ್ನ ನೇಮಕ ಮಾಡಿದ್ದ ರಾಜ್ಯ ಸರ್ಕಾರ ಎರಡು ವರ್ಷಗಳ ಅವಧಿಗೆ ನೇಮಕ ಆದೇಶ ಹೊರಡಿಸಲಾಗಿತ್ತು. ಮೊನ್ನೆಯಷ್ಟೇ ಅವಧಿ ಮುಗಿದ ಕಾರಣ 25 ಶಾಸಕರ ಅಧ್ಯಕ್ಷ ಸ್ಥಾನದ ಅಧಿಕಾರವಾಧಿಯನ್ನ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ 25 ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಮುಂದಿನ ಆದೇಶದ ತನಕ ಮುಂದುವರಿಸಲು ಹೊಸ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಬೌದ್ಧ ಧರ್ಮಕ್ಕೆ ಮತಾಂತರವಾಗಿ ಮೀಸಲಾತಿ ಕೇಳಿದ್ದಕ್ಕೆ ತರಾಟೆ – ಇದು ಹೊಸ ರೀತಿ ವಂಚನೆ ಎಂದ ಸುಪ್ರೀಂ

ಶಾಸಕರಾದ ಶರತ್ ಬಚ್ಚೇಗೌಡ, ಶಿವಲಿಂಗೇಗೌಡ, ಪುಟ್ಟರಂಗಶೆಟ್ಟಿ, ಹೆಚ್‌ಸಿ ಬಾಲಕೃಷ್ಣ, ಎಸ್‌ಆರ್ ಶ್ರೀನಿವಾಸ್, ಎನ್‌ಎ ಹ್ಯಾರೀಸ್, ಬಿಕೆ ಸಂಗಮೇಶ್, ಅಬ್ಬಯ್ಯ ಪ್ರಸಾದ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ 25 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಮುಂದುವರಿಯುವ ಭಾಗ್ಯ ಸಿಕ್ಕಿದೆ.

Share This Article