ಆನೆಕಲ್: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್ಗೆ (School Bus) ಕಾರೊಂದು (Car) ಡಿಕ್ಕಿಯಾದ ಘಟನೆ ಬನ್ನೇರುಘಟ್ಟ (Bannerughatta) ರಸ್ತೆಯ ಅರಕೆರೆ ಬಳಿ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಚಾಲಕ ಸಿಗ್ನಲ್ ತಪ್ಪಿಸಲು ವೇಗವಾಗಿ ನುಗ್ಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಬಸ್ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಜಖಂ ಆಗಿದೆ. ಅಲ್ಲದೇ ಬಸ್ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
ಸ್ಥಳಕ್ಕೆ ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಗರ್ಭಿಣಿ ಸೊಸೆಯನ್ನ ಕೊಂದ ಮಾವ – ಆರೋಪಿ ಅರೆಸ್ಟ್

