ನ್ಯಾಯ ಸಿಗುತ್ತೆ, ಎದೆಗುಂದ ಬೇಡಿ ಎಂದು ಕಾಂಗ್ರೆಸ್ಸಿನವ್ರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ

1 Min Read

ಮೈಸೂರು: ಮುಡಾ ಹಗರಣ (MUDA Scam) ವಿಚಾರದಲ್ಲಿ ನ್ಯಾಯ ಸಿಗುತ್ತೆ, ಎದೆಗುಂದ ಬೇಡಿ ಎಂದು ಕಾಂಗ್ರೆಸ್‌ನವ್ರೇ (Congress) ಹೇಳಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.

ಮುಡಾ ಸೈಟ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಅವರ ಕುಟುಂಬಕ್ಕೆ ಜನಪ್ರತಿನಿಧಿ ನ್ಯಾಯಾಲಯದಿಂದ ರಿಲೀಫ್‌ ಸಿಕ್ಕ ವಿಚಾರವಾಗಿ ಮೈಸೂರಿನಲ್ಲಿ ಅವರು ʻಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದರು. ಈ ವೇಳೆ ಜನಪ್ರತಿನಿಧಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಹಾಕುತ್ತೇನೆ. ನನ್ನ ಜೊತೆ ಈಗಲೂ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಬಹಳಷ್ಟು ಜನ ಸಂಪರ್ಕದಲ್ಲಿ ಇದ್ದಾರೆ. ಅವರೆಲ್ಲ ಎದೆ ಗುಂದ ಬೇಡಿ ನ್ಯಾಯ ಸಿಕ್ಕೆ ಸಿಗುತ್ತದೆ ಎಂದು ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ಮುಡಾ ಹಗರಣದಲ್ಲಿ ಸಿಎಂ ಕಳಂಕ ಮುಕ್ತ; ಲೋಕಾಯುಕ್ತ ಸಲ್ಲಿಸಿದ್ದ ʻಬಿ ರಿಪೋರ್ಟ್‌ʼ ಒಪ್ಪಿದ ಕೋರ್ಟ್‌

ಮೂಡಾ ಸೈಟ್ ವಿಚಾರದಲ್ಲಿ ಸಿಎಂ ಹಾಗೂ ಅವರ ಕುಟುಂಬ ತಪ್ಪು ಮಾಡಿರುವುದು ನಿಜ. ಸಿಎಂ ಕುಟುಂಬಕ್ಕೆ ಶಿಕ್ಷೆ ಕೊಡಿಸುವವರೆಗೂ ಹೋರಾಟ ಮಾಡ್ತಿನಿ. 50:50 ಅನುಪಾತದಲ್ಲಿ ಸೈಟ್ ಪಡೆದ ಎಲ್ಲರಿಗೂ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲಾ ಸೈಟ್ ಸರ್ಕಾರಕ್ಕೆ ವಾಪಸ್ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರು ಕಳಂಕಮುಕ್ತರಾಗಿದ್ದು, ಕಾನೂನು ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.

ಹಗರಣದ ಆರೋಪಿಗಳಾಗಿದ್ದ ಸಿದ್ದರಾಮಯ್ಯ (A1), ಪಾರ್ವತಿ (A2), ಮಲ್ಲಿಕಾರ್ಜುನ ಸ್ವಾಮಿ (A3), ದೇವರಾಜು (A4) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಕೋರ್ಟ್‌ ಜ.28 ರಂದು ಆದೇಶ ನೀಡಿತ್ತು. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Share This Article