ಮುಂಬೈ: ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯ ಸಂಸ್ಕಾರದ ವೇಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಕಣ್ಣೀರಿಟ್ಟಿರು. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ಅಜಿತ್ ಪವಾರ್ ವಿಮಾನ ದುರಂತವನ್ನು ರಾಜಕೀಯಗೊಳಿಸಬೇಡಿ: ಶರದ್ ಪವಾರ್ ಮನವಿ
ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಗಲಿದ ತಮ್ಮ ಪ್ರೀತಿಯ ʻದಾದʼನಿಗೆ ಗೌರವ ನಮನ ಸಲ್ಲಿಸಿದರು. ಅಲ್ಲದೇ ಬೆಳಗ್ಗೆ 9 ಗಂಟೆಗೆ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ (ಗಡಿಮಾ) ನಿಂದ 11 ಗಂಟೆವರೆಗೂ ಅವರ ಪಾರ್ಥಿವ ಶರೀರವನ್ನು ಮೆರವಣಿ ಮಾಡಲಾಯಿತು. ಬಳಿಕ ಬಾರಾಮತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಜ.28 ರಂದು ಬಾರಾಮತಿಯಲ್ಲಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡಿತ್ತು. ಈ ಅವಘಡದಲ್ಲಿ ಅವರು ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ವಿದೀಪ್ ಜಾಧವ್, ಫ್ಲೈಟ್ ಅಟೆಂಡೆಂಟ್ ಪಿಂಕಿ ಮಾಲಿ, ಪೈಲಟ್-ಇನ್-ಕಮಾಂಡ್ ಸುಮಿತ್ ಕಪೂರ್ ಮತ್ತು ಸೆಕೆಂಡ್-ಇನ್-ಕಮಾಂಡ್ ಶಾಂಭವಿ ಪಾಠಕ್ ಮೃತಪಟ್ಟಿದ್ದರು. ಇದನ್ನೂ ಓದಿ: ಅಪ್ಪ.. ನಾನು ಅಜಿತ್ ಪವಾರ್ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್ ಅಟೆಂಡೆಂಟ್ ಕೊನೆ ಮಾತು


